ಮುಂಬೈ: ಖ್ಯಾತ ಹಿರಿಯ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ (86) ಬಿಪಿಯಲ್ಲಿ ಗಣನೀಯವಾಗಿ ಕುಸಿದ ಹಿನ್ನೆಲೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ರತನ್ ಟಾಟಾ ಲೋ ಬಿಪಿಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರತನ್ ಟಾಟಾ ಚಿಕಿತ್ಸೆಗೆ ಸ್ಪಂಧಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ. ಶೀಘ್ರವೇ ಅವರು ಗುಣಮುಖರಾಗಲಿ ಅಂತ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ.