ರೇಣುಕಾಸ್ವಾಮಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು ಭೇಟಿಯಾಗಿ ಮಾತಾಡುವೆ ಎಂದು ಹೇಳಿದರು.
ಮಂಗಳವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿ ಭಾಷಣದ ವೇಳೆ ನಟ ದರ್ಶನ ಅಭಿಮಾನಿಗಳು ಡಿ ಬಾಸ್, ಡಿ ಬಾಸ್ ಎಂದು ಕೂಗಲು ಆರಂಭಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ನಟ ದರ್ಶನ ಪತ್ನಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು ಭೇಟಿಯಾಗಿ ಮಾತಾಡುವೆ ಎಂದು ತಿಳಿಸಿದರು.
ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದರು.