ನಟ ದರ್ಶನ್ ಎಂಡ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚು ಗಂಭೀರತೆ ಪಡೆದುಕೊಳ್ಳುತ್ತಿದೆ. ಸಾಕಷ್ಟು ನಟ, ನಟಿಯರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.ಇದೀಗ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದರೆ.
ರೇಣುಕಾಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಆಗಿರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆತ್ತಿಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಸಂಚು ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ. ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.