ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ದರ್ಶನ್ ಎಂಡ್ ಗ್ಯಾಂಗ್ ನಿಂದ ಹತ್ಯೆಯಾಗಿ 11 ದಿನ ಕಳೆದಿದ್ದರು ಅವರ ಮೊಬೈಲ್ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ರೇಣಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಿದ್ದು ಈ ವೇಳೆ ಮೊಬೈಲ್ ಗಾಗಿ ಮತ್ತಷ್ಟು ಹುಡುಕಾಟ ನಡೆಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷ್ಯವಾಗುವ ಕಾರಣ ಪೊಲೀಸರು ಎಲ್ಲಾ ಕಡೆ ಆತನ ಮೊಬೈಲ್ ಹುಡುಕಾಡಿದ್ದಾರೆ. ಎಲ್ಲಿಯೂ ಮೊಬೈಲ್ ಸಿಗದ ಕಾರಣ ಪೊಲೀಸರು ಕೊನೆಯ ಬಾರಿಗೆ ಸಿಗ್ನಲ್ ಇದ್ದ ಜಾಗವನ್ನು ಸರ್ಚ್ ಮಾಡಿದ್ದಾರೆ. ರಾಜಕಾಲುವೆ ಜಾಗದಲ್ಲೇ ಕೊನೆಯ ಬಾರಿಗೆ ಮೊಬೈಲ್ ಸಿಗ್ನಲ್ ತೋರಿಸಿದೆ.
ಈ ಕಾರಣಕ್ಕೆ ಈಗ ಆರೋಪಿ ಪ್ರದೂಶ್ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್ಮೆಂಟ್ ಮುಂಭಾಗದಲ್ಲಿರುವ ರಾಜಕಾಲುವೆ ಬಳಿ ಕರೆ ತಂದು ಶವ ಎಸೆದ ಜಾಗದತ್ತ ಕರೆತಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್ ಹುಡುಕಾಡಿದ್ದಾರೆ. ಆದರೆ ಮೊಬೈಲ್ ಪತ್ತೆಯಾಗದ ಕಾರಣ ಹುಡುಕಾಟ ನಿಲ್ಲಿಸಿದ್ದಾರೆ.
ಜೂನ್ 8ರಂದು ಸಂಜೆ ‘ಡಿ’ ಗ್ಯಾಂಗ್ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿತ್ತು. ಅದೇ ದಿನ ಬೆಳಗ್ಗೆ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿಗಳು ರೇಣಿಕಾಸ್ವಾಮಿ ಮೈಮೇಲಿದ್ದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಆತನ ಮೊಬೈಲ್ ಅನ್ನು ಸುಮ್ಮನಹಳ್ಳಿಯ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದರು.