ದರ್ಶನ್ ಮತ್ತು ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿಸಹನ ಇಂದು ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಇಂದು ಬೆಳಗಿನ ಜಾವ 7 ಗಂಟೆ 1 ನಿಮಿಷಕ್ಕೆ ಮುದ್ದಾದ ಮಗುವನ್ನು ಬರಮಾಡಿಕೊಂಡಿದ್ದಾರೆ. ಮಗನನ್ನು ಕಳೆದುಕೊಂಡ ನೋವಿನಲ್ಲಿರುವ ರೇಣುಕಸ್ವಾಮಿ ಪೋಷಕರಿಗೆ ಮೊಮ್ಮಗನ ಆಗಮನ ಖುಷಿ ತಂದಿದೆ.
ರೇಣುಕಾಸ್ವಾಮಿ ಹತ್ಯೆ ಸಮಯದಲ್ಲಿ ಪತ್ನಿ ಸಹನಾ ಗರ್ಭಿಣಿಯಾಗಿದ್ದರು. ಈ ವೇಳೆ ಪತಿಯ ಹತ್ಯೆಯಿಂದ ಸಹನ ಕಂಗಲಾಗಿದ್ದರು. ಅಲ್ಲದೆ ಪವಿತ್ರಾ ಗೌಡ ಓರ್ವ ಹೆಣ್ಣಾಗಿ ರೇಣುಕಾಸ್ವಾಮಿಯನ್ನು ಕೊಲೆ ಮಾಡುವ ಹಂತಕ್ಕೆ ಹೋಗಬಾರದಿತ್ತು. ಅದರ ಬದಲು ಪೊಲೀಸರಿಗೆ ದೂರು ನೀಡಬೇಕಿತ್ತು ಎಂದು ಕಣ್ಣೀರಿಟ್ಟಿದ್ದರು.
ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದ ಕುಟುಂಬಕ್ಕೆ ಮೊಮ್ಮಗುವಿನ ಆಗಮನ ಖುಷಿ ನೀಡಿದೆ. ರೇಣುಕಾಸ್ವಾಮಿ ಪತ್ನಿ ಸಹನ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತಂದು ಬಳಿಕ ಪಟ್ಟಣಗೆರೆ ಶೆಡ್ ನಲ್ಲಿ ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಸದ್ಯ ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿರುವ ದರ್ಶನ್ ಜಾಮೀನಿಗಾಗಿ ಎದುರು ನೋಡ್ತಿದ್ದಾರೆ.