ಇಂದಿನ ಜೀವನ ಪದ್ಧತಿಯಲ್ಲಿ ಬೊಜ್ಜು ಎನ್ನುವುದು ಯಾರನ್ನೂ ಬಿಟ್ಟಿಲ್ಲ. ಹೀಗಾಗಿ ಬೊಜ್ಜನ್ನು ಕರಗಿಸಲು ಹೆಚ್ಚಿನ ಆದ್ಯತೆ ನೀಡಬೇಕು. ವ್ಯಾಯಾಮ ಮತ್ತು ಕೆಲ ಆಹಾರದಿಂದ ಬೊಜ್ಜನ್ನು ನಿಯಂತ್ರಿಸಬಹುದಾಗಿದೆ. ಅದರಲ್ಲೂ ಈ ಬೊಜ್ಜಿನಿಂದ ಅಪಾಯಕಾರಿ ಕ್ಯಾನ್ಸರ್ ಬರುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ
ಬೊಜ್ಜಿನಿಂದಾಗಿ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯವು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇಕಡಾ 20 ರಷ್ಟು ಹೆಚ್ಚಾಗುತ್ತಿದೆ ಎಂಬುದನ್ನು ಬಹಿರಂಗ ಪಡಿಸಿದೆ. ಓಹಿಯೋ ಸ್ಟೇಟ್ ಯೂನಿವರ್ಸಿಟಿ ವೆಕ್ಸ್ಲರ್ ಮೆಡಿಕಲ್ ಸೆಂಟರ್ ನ ಸಂಶೋಧಕರ ಪ್ರಕಾರ, ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಅದರಲ್ಲಿಯೂ ಈ ರೋಗವು ವಯಸ್ಸಾದವರ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಅನೇಕ ಜನರು ನಂಬಿಕೊಂಡಿದ್ದಾರೆ.
ಆದರೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಪ್ರಮಾಣವು ಪ್ರತಿವರ್ಷ ಶೇಕಡಾ 1 ರಷ್ಟು ಹೆಚ್ಚುತ್ತಿದೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಪ್ರಕರಣಗಳು ಸಾಮಾನ್ಯವಾಗುತ್ತಿವೆ ಎಂದು ಅಧ್ಯಯನವು ಬಹಿರಂಗಪಡಿಸಿದೆ.
ಸಂಶೋಧಕರು ಈ ವರ್ಷ ಅಕ್ಟೋಬರ್ 4 ರಿಂದ 7 ರವರೆಗೆ ಯುಎಸ್ನಲ್ಲಿ 1,004 ಜನರನ್ನು ಸಮೀಕ್ಷೆ ಮಾಡಿದ್ದಾರೆ. ಇದರಲ್ಲಿ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯದ ಅಂಶಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿದ್ದು. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅರ್ಧಕ್ಕಿಂತ ಹೆಚ್ಚು (53 ಪ್ರತಿಶತ) ವಯಸ್ಕರಲ್ಲಿ ರೋಗದ ಆರಂಭಿಕ ರೋಗಲಕ್ಷಣಗಳನ್ನು ಕಂಡುಬಂದಿರುವುದನ್ನು ಬಹಿರಂಗ ಪಡಿಸಲಾಗಿದೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು ಜನರು ತಮ್ಮ ಪರಿಸ್ಥಿತಿ ಸುಧಾರಿಸಿಕೊಳ್ಳಲು ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ನಂಬಿದ್ದಾರೆ.
ಅರಿವಿನ ಕೊರತೆ: ಈ ಅಧ್ಯಯನದ ಪ್ರಕಾರ ಮೂರನೇ ಒಂದು ಭಾಗದಷ್ಟು (33 ಪ್ರತಿಶತ) ವೃದ್ಧರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಬರುವ ಅಪಾಯದಲ್ಲಿದ್ದಾರೆ. ಇದನ್ನು ಕಡಿಮೆ ಮಾಡಿಕೊಳ್ಳುವ ಮೊದಲ ಹೆಜ್ಜೆ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು. ಏಕೆಂದರೆ ದೇಹದ ಬೊಜ್ಜು ಈ ಕ್ಯಾನ್ಸರ್ ಅಪಾಯವನ್ನು ಶೇಕಡಾ 20 ರಷ್ಟು ಹೆಚ್ಚಿಸುತ್ತದೆ.
ಜೆನೆಟಿಕ್ಸ್, ಜೀವನಶೈಲಿ ಅಂಶಗಳು: ಅಮೇರಿಕನ್ ಕ್ಯಾನ್ಸರ್ ಸೊಸೈಟಿ ಪ್ರಕಾರ, ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ಗಳಲ್ಲಿ ಕೇವಲ 10 ಪ್ರತಿಶತದಷ್ಟು ಮಾತ್ರ ಆನುವಂಶಿಕ ಅಪಾಯದೊಂದಿಗೆ ಸಂಬಂಧ ಹೊಂದಿವೆ, ಆದರೆ ನೀವು ಸಾಧ್ಯವಾದಷ್ಟು ಜೀವನಶೈಲಿಯನ್ನು ಸುಧಾರಿಸಬಹುದು. ಸ್ಥೂಲಕಾಯತೆಯನ್ನು ಕಡಿಮೆ ಮಾಡಲು ಅನೇಕ ಜನರಿಗೆ ಸಾಧ್ಯವಿದೆ. ಇದು ಟೈಪ್ 2 ಮಧುಮೇಹ, ಇತರ ಕ್ಯಾನ್ಸರ್ ಮತ್ತು ಹೃದ್ರೋಗಗಳನ್ನು ತಡೆಯುತ್ತದೆ ಮತ್ತು ಆ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.