ಬೆಂಗಳೂರು:- ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.
ಯಲಹಂಕದ ನಾರ್ಥ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ.
ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.