ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಮಹತ್ವದ ದಾಖಲೆಗಳನ್ನು ತಲುಪಿಸಲುವ ಯೋಜನೆ ರೂಪಿಸಿದೆ.
ಡಿಜಿಟಲ್ ಸ್ವತ್ತಿನ ಪತ್ರವನ್ನು ಆಸ್ತಿ ಹೊಂದಿರುವ ಮಾಲೀಕರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಯೋಜನೆ ಸಿದ್ಧಪಡಿಸಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. “ಹೆಚ್ಚಿನ ತೆರಿಗೆ ಸಂಗ್ರಹದ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿ ಇರುವವರು ಅವರ ಕ್ಷೇತ್ರಗಳನ್ನು ಆರ್ಥಿಕವಾಗಿ ಸದೃಢ ಮಾಡಬೇಕು” ಎಂದು ಸೂಚನೆ ನೀಡಿದರು. ಈ ಮೂಲಕ ಪರೋಕ್ಷವಾಗಿ ಆಸ್ತಿ ತೆರಿಗೆ ಹೆಚ್ಚಳ ವಾಗುವ ಸೂಚನೆ ನೀಡಿದರೇ? ಕಾದು ನೋಡಬೇಕಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, “ಬಿಡಿಎ, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಪತ್ರ ಪತ್ತು ದಾಖಲೆಗಳನ್ನು ಡಿಜಿಟಲೀಕರಣ ಕೆಲವೇ ದಿನಗಳಲ್ಲಿ ಸ್ವತ್ತಿನ ಪತ್ರಗಳನ್ನು ಉಚಿತವಾಗಿ ಮಾಲೀಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ” ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ 20 ವರ್ಷಗಳ ಹಿಂದೆ ಭೂಮಿ ತಂತ್ರಾಶದ ಮೂಲಕ ಪಹಣಿ ನೀಡುವ ಯೋಜನೆ ಜಾರಿಗೆ ತಂದಿತ್ತು. ಪ್ರಸ್ತುತ ಆಸ್ತಿ ಮೌಲ್ಯವನ್ನು ನಿಖರವಾಗಿ ಲೆಕ್ಕಾಚಾರ ಮಾಡಲು ಡ್ರೋನ್ ಸೇರಿದಂತೆ ಅನೇಕ ತಂತ್ರಜ್ಞಾನ ಬಳಸಿ ನಿಖರವಾಗಿ ಲೆಕ್ಕ ಹಾಕಲಾಗುವುದು” ಎಂದರು.
ಒಂದಷ್ಟು ಜನರು ಒಂದು ಅಂತಸ್ತಿನ ಕಟ್ಟಡ ಕಟ್ಟಲು ಅನುಮತಿ ಪಡೆದುಕೊಂಡು ನಾಲ್ಕು ಅಂತಸ್ತಿನ ಕಟ್ಟಡ ಕಟ್ಟಿರುತ್ತಾರೆ. ಇಂತಹ ಕಟ್ಟಡಗಳನ್ನು ಗುರುತಿಸಬೇಕು. ರಾಜಕೀಯ ಒತ್ತಡಗಳಿಗೆ ಅಧಿಕಾರಿಗಳು ಒಳಗಾಗಬಾರದು. ಆಸ್ತಿ ಮೌಲ್ಯವನ್ನು ಸರಿಯಾಗಿ ಗುರುತಿಸಿ, ತೆರಿಗೆ ಸಂಗ್ರಹ ಮಾಡಬೇಕು” ಎಂದು ತಿಳಿಸಿದರು.