ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಇಡೀ ಗ್ರಾಮದಲ್ಲಿ ಆತಂಕ ಆವರಿಸಿತ್ತು. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಈಗ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲಾಗಿದೆ. ಇನ್ನೂ ಅವಘಡ ಸ್ಥಳಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಮಂಡ್ಯ ಡಿಸಿ ಡಾ.ಕುಮಾರ್, ದಕ್ಷಿಣ ವಲಯ ಐಜಿ ಬೋರಲಿಂಗಯ್ಯ, ಎಸ್ಪಿ ಮಲ್ಲಿಕಾರ್ಜುನ, ಬಾಲದಂಡಿ ಸೇರಿದಂತೆ ಹಲವು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಘಟನೆಗೆ ನಿಖರ ಕಾರಣ ವೇನು, ಯಾಕೆ ನಿಯಂತ್ರಣ ಸಾಧ್ಯವಾಗಿಲ್ಲ ಎಂದು ಚರ್ಚೆ ಮಾಡಲಿದ್ದು, ನಂತರ ಸುದ್ದಿಗೋಷ್ಠಿ ನಡೆಸಲಿದ್ದಾರೆ.