ಲಂಡನ್: ಬ್ರಿಟನ್ ಸಂಸತ್ ಚುನಾವಣೆಯಲ್ಲಿ (UK Elections 2024) ಕನ್ಸರ್ವೇಟಿವ್ ಪಕ್ಷಕ್ಕೆ (Conservative Party) ಹೀನಾಯ ಸೋಲಾದ ಬೆನ್ನಲ್ಲೇ ಪ್ರಧಾನಿ ರಿಷಿ ಸುನಾಕ್ (Rishi Sunak) ಕ್ಷಮೆ ಕೇಳಿದ್ದಾರೆ
ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ (Keir Starmer) ನೇತೃತ್ವದ ಲೇಬರ್ ಪಕ್ಷವು (Labour Party) ಒಟ್ಟು 650 ಸ್ಥಾನಗಳಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದ ನಂತರ ಕ್ಷಮೆಯಾಚಿಸಿದ ರಿಷಿ ಸುನಕ್ ಸೋಲನ್ನು ಒಪ್ಪಿಕೊಂಡರು. ಪಕ್ಷದ ಸೋಲಿಗೆ ಕ್ಷಮೆ ಕೇಳಿದ ಅವರು ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಹೇಳಿದರು.
ಲೇಬರ್ ಪಾರ್ಟಿ ಗೆದ್ದ ಬಳಿಕ ಭಾಷಣ ಮಾಡಿದ ಪ್ರಧಾನಿ ಅಭ್ಯರ್ಥಿ ಕೀರ್ ಸ್ಟಾರ್ಮರ್, ಅವ್ಯವಸ್ಥೆಯನ್ನು ಕೊನೆಗೊಳಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೇವೆ ಮತ್ತು ಅದನ್ನೇ ನಾವು ಮಾಡುತ್ತೇವೆ. ಇನ್ನು ಮುಂದೆ ಬದಲಾವಣೆ ಪ್ರಾರಂಭವಾಗಲಿದೆ. ನಮ್ಮ ದೇಶವನ್ನು ಮತ್ತೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.