ಬೆಂಗಳೂರು,ಡಿಸೆಂಬರ್ 26: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಇರುವಾಗಲೆಲ್ಲ ಆತ್ಮಹತ್ಯೆಗಳು ಹೆಚ್ಚಾಗುತ್ತವೆ. ಇಲ್ಲಿನವರೆಗೆ ರೈತರಿಗೆ ಭರವಸೆ ಮೂಡಿಸುವ ಯಾವ ಹೇಳಿಕೆಯನ್ನೂ ಸರಕಾರ ಕೊಟ್ಟಿಲ್ಲ ಎಂದು ಮಾಜಿ ಶಾಸಕ ಪಿ ರಾಜೀವ್ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವರು ರೈತರ ಜೀವ, ಬದುಕಿನ ಜೊತೆ ಚೆಲ್ಲಾಟವಾಡುವ ಭಾವನೆಯಿಂದ ಹೊರಬರಬೇಕು ಎಂದು ಅವರು ಆಗ್ರಹಿಸಿದರು.
ಈ ಸರಕಾರ ರೈತರಿಗೆ ತಕ್ಷಣವೇ ಪರಿಹಾರ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಜನಪರ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಮೊದಲ ಹಂತವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ಮತ್ತು ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆ ಪ್ರಮುಖರು ಬಳಿಕ ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದು ಎಂದು ವಿವರಿಸಿದರು. ನಾಡಿದ್ದು, ಡಿ.28ರಂದು ರಾಜ್ಯ ಪ್ರಮುಖರ ಸಭೆಯನ್ನು ರಾಜ್ಯಾಧ್ಯಕ್ಷರು ಕರೆದಿದ್ದಾರೆ ಎಂದರು.