ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಈವರೆಗೆ ಮಂತ್ರಿ ಮಾಲ್ ಗೆ ಸಂಕಷ್ಟ ಎದುರಾಗಿದ್ದನ್ನು ನೋಡಿದ್ದೇವೆ. ಇದೀಗ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು, ತಮ್ಮ ಮಾಲ್ ಗೆ ಬೀಗ ಜಡೆದಿದ್ದಾರೆ.. ಅದ್ಯಾಕೆ ಅಂತೀರಾ ಈ ಸ್ಟೋರಿ ನೋಡಿ..
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಪಾಲಿಕ ಕ್ರಮ ಕೈಗೊಳ್ಳುತ್ತಿದೆ. ನೋಟಿಸ್ ನೀಡಿದರು ತೆರಿಗೆ ಕಟ್ಟದ ಅಂಗಡಿಗಳು, ವಾಣಿಜ್ಯ ಮಳಿಗೆಗಳಿಗೆ ಬೀಗಮುದ್ರೆ ಹಾಕುತ್ತಿದೆ. ಇದೀಗ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ರಾಕ್ಲೈನ್ ಮಾಲ್ಗೂ ಬೀಗಮುದ್ರೆ ಹಾಕಿದೆ.
ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ಲೈನ್ ಮಾಲ್ 2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಟಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದರೂ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್ಗೆ ಬೀಗಮುದ್ರೆ ಹಾಕಿದ್ದಾರೆ.
2011ರಿಂದ 11 ಕೋಟಿ 56 ಲಕ್ಷ ತೆರಿಗೆ ಬಾಕಿ ಉಳಿಸಿಕೊಂಡಿದೆ. 11 ವರ್ಷದಿಂದ ತೆರಿಗೆ ಕಟ್ಟಿಲ್ಲ. ಒಮ್ಮೆ ಒಂದು ಬಾರಿ 1 ಕೋಟಿ 10 ಲಕ್ಷ ರೂ. ಕಟ್ಟಿದ್ದಾರೆ. 26 ಲಕ್ಷ ಚೆಕ್ ಕೊಟ್ಟಿದ್ದಾರೆ. ಈಗ ನೋಟಿಸ್ ಕೊಟ್ಟಿದ್ದೇವೆ ಆದರೂ ಕಟ್ಟಿಲ್ಲ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಟ್ಟಾರೆ ಆಸ್ತಿ ತೆರಿಗೆ ಪಾವತಿ ಮಾಡದ ಮಾಲ್ ಗಳನ್ನು ಬಿಬಿಎಂಪಿ ಅಧಿಕಾರಿಗಳು ರಣ ಹದ್ದಿನಂತೆ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈ ಹಿಂದೆ ಮಂತ್ರಿ ಮಾಲ್ ಬೀಗ ಜಡಿದು ಬಿಸಿ ಮುಟ್ಟಿಸಿದ್ರು.. ಇದೀಗ ರಾಕ್ ಲೈನ್ ವೆಂಕಟೇಶ್ ಗೆ ಬಿಸಿ ಮುಟ್ಟಿದ್ದು ಮುಂದೆ ಯಾರಿಗೆ ಶಾಕ್ ಕಾದಿದೆ ಎಂದು ನೋಡಬೇಕಿದೆ..