ನವದೆಹಲಿ: ಟೀಂ ಇಂಡಿಯಾ (Team India) ನಾಯಕ ಹಿಟ್ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ (Rohith Sharma) ವಿಶ್ವಕಪ್ ಕ್ರಿಕೆಟ್ನಲ್ಲಿ ಶತಕ, ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.
ಅಫ್ಘಾನಿಸ್ತಾನ (Afghanistan) ವಿರುದ್ಧ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್ನಲ್ಲಿ (World Cup Cricket) 7 ಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕರ್ 6, ಶ್ರೀಲಂಕಾದ ಕುಮಾರ ಸಂಗಕ್ಕಾರ 5, ರಿಕ್ಕಿಪಾಂಟಿಂಗ್ 5, ಡೇವಿಡ್ ವಾರ್ನರ್ 4, ಸೌರವ್ ಗಂಗೂಲಿ 4 ಶತಕ ಸಿಡಿಸಿದ್ದರು.
ಟಿ20 ಶೈಲಿಯಲ್ಲಿ ಬ್ಯಾಟ್ ಬೀಸಿದ ರೋಹಿತ್ ಶರ್ಮಾ 30 ಎಸೆತದಲ್ಲಿ 50 ರನ್ (7 ಬೌಂಡರಿ, 2 ಸಿಕ್ಸರ್) ಹೊಡೆದರೆ 63 ಎಸೆತದಲ್ಲಿ 100 ರನ್ (12 ಬೌಂಡರಿ, 4 ಸಿಕ್ಸರ್) ಚಚ್ಚಿದರು. ಅಂತಿಮವಾಗಿ ರೋಹಿತ್ ಶರ್ಮಾ ತಂಡದ ಮೊತ್ತ 205 ಆಗಿದ್ದಾಗ 131 ರನ್ (84 ಎಸೆತ, 16 ಬೌಂಡರಿ, 5 ಸಿಕ್ಸರ್) ಸಿಡಿಸಿ ರಶೀದ್ ಖಾನ್ ಬೌಲಿಂಗ್ನಲ್ಲಿ ಬೌಲ್ಡ್ ಆಗುವ ಮೂಲಕ ಔಟಾದರು.