ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸಾವನ್ನಪ್ಪಿದೆ. 25 ರಿಂದ 30 ವರ್ಷದ ಕಾಡಾನೆ ಸಾವನ್ನಪ್ಪಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆ ಬಳಿಕ ಕಾಡಾನೆಯ ಸಾವಿಗೆ ಕಾರಣ ತಿಳಿದು ಬರಲಿದೆ.
ಮೊನ್ನೆಯಷ್ಟೆ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ಅಶ್ವಥಾಮ ಸಾವನ್ನಪ್ಪಿದ್ದ. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿದ್ದರಿಂದ ಅಶ್ವತ್ಥಾಮ ಆನೆ ಮೃತಪಟ್ಟಿದೆ ಎಂದು ಹೇಳಲಾಗಿದೆ.