ಬೆಂಗಳೂರು ಕೇಂದ್ರ ಕಾರಾಗೃಹದ ನೂತನ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿದ್ದ ವಿ.ಶೇಷಮೂರ್ತಿ ಜಾಗಕ್ಕೆ ಕೆ.ಸುರೇಶ್ ಅವರನ್ನು ನೇಮಿಸಿ ಸರಕಾರ ಆದೇಶದಲ್ಲಿ ತಿಳಿಸಿದೆ.
ನಟ ದರ್ಶನ್ಗೆ ರಾಜಾತಿಥ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರಕಾರ, ಈಗಾಗಲೇ 9 ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಪರಪ್ಪನ ಅಗ್ರಹಾರಕ್ಕೆ ಕೆಐಎಸ್ಎಫ್ ಪೊಲೀಸರಿಂದ ಭದ್ರತೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕೆಐಎಸ್ಎಫ್ (ಕರ್ನಾಟಕ ಕೈಗಾರಿಕ ಭದ್ರತಾ ದಳ ಇಲಾಖೆ) ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಅವರ ಅನುಮತಿ ಪಡೆದು ಜೈಲಿನ ಆವರಣಕ್ಕೆ ಪ್ರವೇಶಿಸಬೇಕಾಗಿದೆ. ಇನ್ನು ಕೇಂದ್ರ ಕಾರಗೃಹ ಭದ್ರತೆಗಾಗಿ ಓರ್ವ ಅಸಿಸ್ಟೆಂಟ್ ಕಮಾಂಡೆಂಟ್, ಇಬ್ಬರು ಇನ್ಸ್ಪೆಕ್ಟರ್ ಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಿಬ್ಬಂದಿ ನೇಮಕ ಮಾಡಲಾಗಿದೆ.