ಬೆಂಗಳೂರು: ಗೃಹಲಕ್ಷ್ಮಿ, ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು DBT ಮೂಲಕ ನೀಡುವ ಯೋಜನೆಯಾಗಿರುತ್ತದೆ.
ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ, ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ.