ಎಲ್ ಕೆಜಿ ಯೂಕೆಜಿ ಆರಂಭಿಸುವ ಪ್ರತಿ ಅಂಗನವಾಡಿ ಗೆ5 ಲಕ್ಷ ರೂ ಅನುದಾನವಾಗಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೇದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಪ್ರಸತುತ ಸೇವೆಯಲ್ಲಿರುವ ಅಂಗನವಾಡಿ ಶಿಕ್ಷಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲಾಗುವುದು ಹಾಗೆ ಅಂಗನವಾಡಿ ಕೇಂದ್ರಗಳಿಗೆ ಉನ್ನತಿ ಮಾಡುವುದರ ಜೊತೆಗೆ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡಲಾಗುವುದು ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ,ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಡೇಟ್ ಫಿಕ್ಸ್ ಮಾಡಿದೆ.