ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠವು ತನ್ನ ತೀರ್ಪಿನಲ್ಲಿ, ಪತಿಯಿಂದ ದೂರವಾದ ಪತ್ನಿ ಪ್ರತ್ಯೇಕವಾಗಿ ನೆಲೆಸಲು 5 ಸಾವಿರ ರೂ ಹೆಚ್ಚುವರಿ ಪರಿಹಾರ ನೀಡಲು ಸೂಚನೆ ನೀಡಿದೆ.ಪತಿ ಹಾಗೂ ಆತನ ಎರಡನೇ ಪತ್ನಿಯ ಕುಟುಂಬದ ಇತರ ಸದಸ್ಯರು ವಾಸಿಸುತ್ತಿರುವ ಮನೆಯಲ್ಲಿಯೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡುವಂತೆ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೊದಲನೇ ಪತ್ನಿ ಬೆಂಗಳೂರಿನ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀಷಾನಂದ ಅವರಿದ್ದ ನ್ಯಾಯಪೀಠ,
ವಿಚಾರಣಾ ನ್ಯಾಯಾಲಯದ ಆದೇಶವನ್ನು ತಿದ್ದುಪಡಿ ಮಾಡಿ ಮೊದಲ ಪತ್ನಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಲು ಮಾಸಿಕ 5 ಸಾವಿರ ರೂ. ಪಾವತಿ ಮಾಡುವಂತೆ ಸೂಚಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯದಂತೆ ಶೈಲಜಾ ಅವರು ಎರಡನೇ ಪತ್ನಿ ಮತ್ತವರ ಕುಟುಂಬ ಸದಸ್ಯರೊಂದಿಗೆ ಒಂದೇ ಮನೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ವಾಸ ಮಾಡುವುದು ಪ್ರಯೋಗಿಕವಾಗಿ ಕಾರ್ಯಸಾಧುವಿಲ್ಲ. ಇದರಿಂದ ಕುಟುಂಬದ ಇತರ ಸದಸ್ಯರ ಜೊತೆಗೆ ಅಸಮಾಧಾನ ಏರ್ಪಟ್ಟು, ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಕ್ಕೆ ಕಾರಣವಾಗಬಹುದು. ಆದ್ದರಿಂದ ಆಕೆ ಪ್ರತ್ಯೇಕ ಸ್ಥಳದಲ್ಲಿ ವಾಸ ಮಾಡುವುದು ಸೂಕ್ತವಾಗುತ್ತದೆ. ಅದಕ್ಕಾಗಿ ಪತಿಯು ಆಕೆಗೆ ಮಾಸಿಕ 5 ಸಾವಿರ ರೂ. ಪಾವತಿಸಲು ಸೂಚನೆ ನೀಡಿ ನಿರ್ದೇಶನ ನೀಡಿದೆ.