ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ದಾಳಿ ಮುಂದುವರೆದಿದೆ. ಇದೀಗ ರಷ್ಯಾದ ಎರಡು ಕ್ಷಿಪಣಿಗಳು ಉಕ್ರೇನ್ನ ಕ್ರಾಮಾಟೋರ್ಸ್ಕ್ ಮೇಲೆ ದಾಳಿ ನಡೆಸಿದ್ದು ಪರಿಣಾಮ ಓರ್ವ ಮಗು ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 42 ಜನರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜನ ಸಂದಣಿ ಇರುವ ಸ್ಥಳಗಳನ್ನು ಗುರುತಿಸಿ ರಷ್ಯಾ ದಾಳಿ ನಡೆಸಿದ್ದು, ಮೊದಲ ಕ್ಷಿಪಣಿಯು ರೆಸ್ಟೋರೆಂಟ್ಗೆ ಅಪ್ಪಳಿಸಿತು.ಇದಾದ ಕೆಲ ಹೊತ್ತಿನಲ್ಲಿಯೇ ಎರಡನೇ ಕ್ಷಿಪಣಿ ಕ್ರಾಮಾಟೋರ್ಸ್ಕ್ನ ಹೊರವಲಯದಲ್ಲಿರುವ ಹಳ್ಳಿಯೊಂದರ ಮೇಲೆ ನಡೆದಿದೆ ಎಂದು ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.