ವಿಜಯವಾಡ: ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಶುಕ್ರವಾರ ಆಂಧ್ರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹೈದರಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ಅವರ ಪತ್ನಿ ವೈಎಸ್ ಭಾರತಿ ರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ ಕೆಎಸ್ ಜವಾಹರ್ ರೆಡ್ಡಿ, ಹಲವು ಹಾಲಿ ಸಚಿವರು, ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹಿರಿಯ ಅಧಿಕಾರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.