ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕರೆ ನೀಡಿದರು.
2023ರ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ಜಿಸಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದರು. ಬೆಳಗ್ಗೆ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ನಡೆಸಿ, ಬಳಿಕ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆ ಬಹಳ ಮಹತ್ವ ಪೂರ್ಣದ್ದಾಗಿದೆ. 2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಗುರಿ ನಮ್ಮದಿದೆ. ಮೋದಿ ಅವರ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ (Sabka Saath Sabka Vikas) ಅನ್ನೋ ಪರಿಕಲ್ಪನೆಯೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡ್ತಿದೆ. ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕರೆ ನೀಡಿದರು.
ಮೋದಿ ಪ್ರತಿ ತಿಂಗಳೂ ವಿಚಾರಿಸ್ತಾರೆ:
ಪ್ರಧಾನಿ ಮೋದಿ ಅಭಿವೃದ್ಧಿ ವಿಚಾರದಲ್ಲಿ ಪ್ರತಿ ತಿಂಗಳೂ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸುತ್ತಾರೆ. ಕೇಂದ್ರದ ಯೋಜನೆಗಳು ಜಿಲ್ಲೆಯವರೆಗೆ ತಲುಪುತ್ತಿದೆಯಾ? ಅಂತಾ ಜಿಲ್ಲಾಧಿಕಾರಿಗಳನ್ನ ವಿಚಾರಣೆ ಮಾಡ್ತಿದ್ದಾರೆ. ಈ ಬಾರಿ ಬಜೆಟ್ನಲ್ಲೂ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಲಾಗಿದೆ. ಈ ರೀತಿಯಲ್ಲಿ ಕರ್ನಾಟಕದ ಜೊತೆಗೆ ಭಾರತವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ ಎಂದು ಗುಣಗಾನ ಮಾಡಿದರು. ಚುನಾವಣೆ ಬಳಿಕ ಸಿಎಂ ಆಯ್ಕೆ:
ಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಚುನಾವಣೆಯಲ್ಲಿ ವಿಜೇತರಾದ ಬಳಿಕ ಶಾಸಕರು ಸಿಎಂ ರನ್ನ ಆಯ್ಕೆ ಮಾಡ್ತಾರೆ. ಇವಾಗ ಇರುವ ಸಿಎಂ ಚುನಾವಣೆಗೆ ನಿಂತಿದ್ದಾರೆ, ಚುನಾವಣೆ ಬಳಿಕ ನೋಡೋಣ ಎಂದರು.
ಬಿಎಸ್ವೈಗೆ ಗೌರವ ಕೊಡ್ತಿದ್ದೇವೆ:
ಬಿಜೆಪಿ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಇವತ್ತಿಗೂ ಕೊಡಬೇಕಾದ ಗೌರವ ನಾವು ಕೊಡ್ತಿದ್ದೇವೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ವೀರೇಂದ್ರ ಪಾಟೀಲ್ ರನ್ನ ಅವಮಾನಿಸಿ ಸಿಎಂ ಹುದ್ದೆಯಿಂದ ಕೆಳಗಿಳಿಸಿದ್ರು. ಒಂದು ಕುಟುಂಬದ ಗುಲಾಮರಾಗಿರುವ ಕಾಂಗ್ರೆಸ್ಗೆ ನೈತಿಕತೆ ಇಲ್ಲ. ಮೋದಿ ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವಾಗ ಅವರ ಹೆಸರನ್ನ ಕರ್ನಾಟಕದಲ್ಲಿ ಬಿಜೆಪಿ ಬಳಸಿಕೊಳ್ಳೋದ್ರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.