ಬೆಂಗಳೂರು:- ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಬುಧವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರು ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಸದ್ಯ ಅನೇಕ ಗಣ್ಯರು, ರಾಜಕೀಯ ನಾಯಕರುಗಳು ಮೃತರ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ನಡುವೆ ಪರಿಷತ್ ಶಾಸಕ ಟಿಎ ಶರವಣ ಅವರು ಕೂಡ SM ಕೃಷ್ಣ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಎಸ್ ಎಂ ಕೃಷ್ಣ ಅವರ ಸದಾಶಿವ ನಗರದ ಸ್ವಗೃಹದಲ್ಲಿ ಅಂತಿಮ ದರ್ಶನ ಪಡೆದು ಮೃತರ ಆತ್ಮಕ್ಕೆ ಟಿಎ ಶರವಣ ಅವರು ಶಾಂತಿ ಕೋರಿದ್ದಾರೆ.
ಇನ್ನೂ ರಾಜಕೀಯ ರಂಗದ ಮುತ್ಸದಿ ಆಗಿದ್ದ ಕೃಷ್ಣ ಅವರು ಕರ್ನಾಟಕದ ಪ್ರಗತಿಯ ಮೇಲೆ ಬಹುದೊಡ್ಡ ಪರಿಣಾಮ ಬೀರಿದ್ದರು. ರಾಜಕೀಯ ನಾಯಕರಾಗಿದ್ದ ಕೃಷ್ಣ ಅವರು ಹಲವು ಕ್ಷೇತ್ರದ ಗಣ್ಯರೊಟ್ಟಿಗೆ ಸಂಪರ್ಕ ಹೊಂದಿದ್ದರು. ಹಲವು ಕ್ಷೇತ್ರದ ಗಣ್ಯರು ಕೃಷ್ಣ ಅವರ ಬಗ್ಗೆ ಗೌರವ ಇರಿಸಿಕೊಂಡಿದ್ದರು. ಇದೀಗ ಕೃಷ್ಣ ಅವರು ನಿಧನರಾದ ಬೆನ್ನಲ್ಲೆ ಅವರ ಹಲವು ರಂಗದ ಗಣ್ಯರು ಅಂತಿಮ ದರ್ಶನ ಪಡೆದು, ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.