ತಮಿಳುನಾಡು: 2024ರ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್ನ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮತದಾನ ಮಾಡಿದರು.
21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 9 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಈಶಾನ್ಯದ ಆರು ರಾಜ್ಯಗಳು, ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳು, ಲಕ್ಷದ್ವೀಪದ 1 ಕ್ಷೇತ್ರ, ಅರುಣಾಚಲ ಪ್ರದೇಶದ 2, ಬಿಹಾರದ 4, ಅಸ್ಸಾಂನ 4, ಛತ್ತೀಸ್ಗದ 1, ಮಧ್ಯಪ್ರದೇಶದ 6, ಮಹಾರಾಷ್ಟ್ರದ 5,
ಮಣಿಪುರದ 2, ಮೇಘಾಲಯದ 2, ಮಿಜೋರಾಂದ 1, ನಾಗಾಲ್ಯಾಂಡ್ನ 1, ರಾಜಸ್ಥಾನದ 12, ಸಿಕ್ಕಿಂನ 1, ತ್ರಿಪುರಾದ 1, ಉತ್ತರ ಪ್ರದೇಶದ 8, ಉತ್ತರಾಖಂಡದ 5, ಪಶ್ಚಿಮ ಬಂಗಾಳದ 3, ತಮಿಳುನಾಡಿನ 39, ಅಂಡಮಾನ್ ಮತ್ತು ನಿಕೋಬಾರ್ನ 1, ಜಮ್ಮು ಮತ್ತು ಕಾಶ್ಮೀರದ 1, ಲಕ್ಷದ್ವೀಪದ 1 ಮತ್ತು ಪುದುಚೇರಿಯ 1 ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.