ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್ 17 ( ಭಾನುವಾರ) ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಮೊದಲ ಟಿ20-ಐ ಪಂದ್ಯದಲ್ಲಿ ತಮ್ಮ ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ (55* ರನ್) ಸಿಡಿಸಿದ ಸಾಯಿ ಸುದರ್ಶನ್ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯದಲ್ಲೇ ಫಿಫ್ಟಿ ಬಾರಿಸಿದ 17ನೇ ಹಾಗೂ 4ನೇ ಆರಂಭಿಕ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಭಾರತ ತಂಡದ ಪರ ಪದಾರ್ಪಣೆ ಮಾಡಿದ 400ನೇ ಆಟಗಾರರಾದ ಸಾಯಿ ಸುದರ್ಶನ್ ನಾಯಕ ಕೆ.ಎಲ್.ರಾಹುಲ್ ರಿಂದ ಕ್ಯಾಪ್ ಪಡೆದರು.
ಋತುರಾಜ್ ಗಾಯಕ್ವಾಡ್ ರೊಂದಿಗೆ ಇನಿಂಗ್ಸ್ ಆರಂಭಿಸಿದ ಸಾಯಿ ಸುದರ್ಶನ್ , ದಕ್ಷಿಣ ಆಫ್ರಿಕಾದ ಯುವ ವೇಗಿ ನಂಡ್ರೆ ಬರ್ಗರ್ ಬೌಲಿಂಗ್ ನಲ್ಲಿ ಕವರ್ ಡ್ರೈವ್ ಮೂಲಕ ರನ್ ಗಳಿಸಿದ ಸಾಯಿಸುದರ್ಶನ್ ಅವರು ಬರ್ಗರ್ ಬೌಲಿಂಗ್ ನಲ್ಲಿ ಚೆಂಡನ್ನು ಪ್ಯಾಡ್ ಮೇಲೆ ಎಳೆದುಕೊಂಡಿದ್ದರಾದರೂ ಅಂಪೈರ್ ಕೃಪೆಯಿಂದ ಜೀವದಾನ ಪಡೆದಿದ್ದರು. ದಕ್ಷಿಣ ಆಫ್ರಿಕಾ ರಿವ್ಯೂ ಪಡೆಯದ ಕಾರಣ ತಮಿಳುನಾಡಿನ ಯುವ ಆಟಗಾರ ಮತ್ತೊಮ್ಮೆ ಪಾರಾದರು. ಋತುರಾಜ್ ಗಾಯಕ್ವಾಡ್ (5ರನ್) ಔಟಾದ ನಂತರ ಸಾಯಿ ಸುದರ್ಶನ್ ತಮ್ಮ ಬ್ಯಾಟಿಂಗ್ ವೇಗವನ್ನು ಹೆಚ್ಚಿಸಿಕೊಂಡರು.
ವೇಗಿ ಅರ್ಷ್ದೀಪ್ ಸಿಂಗ್ ಹರಿಣರ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ ಪಡೆಯುವ ಮೂಲಕ ಭಾರತ ಪರ ಹೊಸ ದಾಖಲೆಯೊಂದನ್ನು ಬರೆದರು. ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್ ಕಿತ್ತ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆದ್ರೆ, ಒಟ್ಟಾರೆಯಾಗಿ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್ ಪಡೆದ ಭಾರತೀಯ ಬೌಲರ್ಗಳ ಪಟ್ಟಿಯಲ್ಲಿ ಅವರಿಗೆ 4ನೇ ಸ್ಥಾನವನ್ನೂ ಪಡೆದುಕೊಂಡರು. ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಮೊದಲಿಗರಾಗಿದ್ದಾರೆ. ಜೋಶಿ 1999ರಲ್ಲಿ ನಡೆದಿದ್ದ ಪಂದ್ಯದಲ್ಲಿ ಕೇವಲ 6 ರನ್ಗೆ 5 ವಿಕೆಟ್ ಕಿತ್ತು ಮಿಂಚಿದ್ದರು. ಯಜುವೇಂದ್ರ ಚಾಹಲ್ (22 ರನ್ಗೆ 5) ಮತ್ತು ರವೀಂದ್ರ ಜಡೇಜಾ (33 ರನ್ಗೆ 5) ನಂತರದ ಸ್ಥಾನಗಳಲ್ಲಿದ್ದಾರೆ.