ಬೆಂಗಳೂರು: ಕಳೆದ ಒಂದು ತಿಂಗಳಿಂದಲೂ ಮುಷ್ಕರ ನಡೆಸುತ್ತಿರುವ ರಾಜ್ಯ ಅತಿಥಿ ಉಪನ್ಯಾಸಕರಿಗೆ (Guest Lecturers) 5 ಸಾವಿರ ವೇತನ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದೆ. ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ (M.C.Sudhakar) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅತಿಥಿ ಉಪನ್ಯಾಸಕರ ಬೇಡಿಕೆಯಲ್ಲಿ ಸೇವೆ ಕಾಯಂ ಬಹುಮುಖ್ಯ ಬೇಡಿಕೆಯಾಗಿದೆ. ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ.