ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಿತ ಆಂಬರ್ ಗ್ರಿಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ತಮಿಳುನಾಡಿನ ಮೂಲದವರು ಎಂದು ಗುರುತಿಸಲಾಗಿದೆ.
ಬಂಧಿತರು ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ನಿಷೇಧಿತ ಆಂಬರ್ ಗ್ರಿಸ್ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಬಂಧಿತರಿಂದ ಕೋಟ್ಯಾಂತರ ರೂ ಬೆಲೆಬಾಳುವ ಸುಮಾರು 6.5 ಕೆ.ಜಿ. ತೂಕದ ಆ್ಯಂಬರ್ ಗ್ರಿಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಆರೋಪಿಗಳ ವಿರುದ್ಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.