ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇಷ್ಟು ದಿನ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದ ಸಲ್ಮಾನ್ ಖಾನ್ ಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.
ಈ ಬಗ್ಗೆ ಮುಂಬೈ ಸಂಚಾರ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ಭಾಕಿ ಎಂದು ಹೇಳಿದ್ದಾನೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 30ರಂದು ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್ ಖಾನ್ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶಾಸಕ ಮತ್ತು ದಿ. ಬಾಬಾ ಸಿದ್ದಿಕಿ ಅವರ ಪುತ್ರ ಸಲ್ಮಾನ್ ಖಾನ್ ಮತ್ತು ಜೀಶನ್ ಸಿದ್ದಿಕಿ ಅವರನ್ನು ಒಳಗೊಂಡ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕಳೆದ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ .
ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ. ಬೆದರಿಕೆ ಹಾಕಿದ್ದಲ್ಲದೆ, ಆರೋಪಿ ಮೊಹಮ್ಮದ್ ತಯ್ಯಬ್ ಅಲಿಯಾಸ್ ಗುರ್ಫಾನ್, ಜೀಶನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.