ಟಾಲಿವುಡ್ ಬ್ಯೂಟಿ ನಟಿ ಸಮಂತಾ ಅವರ ಮಾಜಿ ಪತಿ ನಟ ನಾಗಚೈತನ್ಯ ನಟಿ ಶೋಭಿತಾ ಅವರೊಂದಿಗೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಆ.8ರಂದು ನಾಗಚೈತನ್ಯ ಮನೆಯಲ್ಲಿ ಅಕ್ಕಿನೇನಿ ನಾಗಾರ್ಜುನ್ ಸಾರಥ್ಯದಲ್ಲಿ ನಿಶ್ಚಿತಾರ್ಥ ನಡೆದಿದೆ. ಮಾಜಿ ಗಂಡ ಬೇರೆ ನಟಿಯ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದರಿಂದ ಸಮಂತಾ ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕುತೂಹಲ ಶುರುವಾಗಿತ್ತು. ಈ ಮಧ್ಯೆ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಒಡೆದ ಹೃದಯದ ಇಮೋಜಿ ಹಾಕಿದ್ದರು. ಆದರೆ ಇದು ನಾಗಚೈತನ್ಯ ಎಂಗೇಜ್ ಮೆಂಟ್ ಮಾಡಿಕೊಂಡ ಕಾರಣದಿಂದಾಗಿ ಅಲ್ಲ.
ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಸಾಕಷ್ಟು ವಿಚಾರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಸಿನಿಮಾ, ರಾಜಕೀಯ ಮುಂತಾದ ಅನೇಕ ವಿಚಾರಗಳ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡುತ್ತಾರೆ. ಆಗಸ್ಟ್ 8ರಂದು ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಒಡೆದ ಹೃದಯದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಹಾಗಂತ ಇದು ನಾಗ ಚೈತನ್ಯ ಅವರ ನಿಶ್ಚಿತಾರ್ಥಕ್ಕೆ ಸಂಬಂಧಿಸಿದ್ದಲ್ಲ. ಬದಲಾಗಿ ಕ್ರೀಡೆಗೆ ಸಂಬಂಧಿಸಿದ್ದು.
ಭಾರತದ ಕ್ರೀಡಾಪ್ರೇಮಿಗಳಿಗೆ ಆಗಸ್ಟ್ 8 ಎಂದರೆ ಬೇಸರದ ದಿನವಾಗಿ ಪರಿಣಮಿಸಿದೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬಂಗಾರದ ಪದಕ ಗೆಲ್ಲುವ ಅವಕಾಶದಿಂದ ಕೊನೇ ಕ್ಷಣದಲ್ಲಿ ವಂಚಿತರಾದ ವಿನೇಶ್ ಫೋಗಟ್ ಅವರು ಕುಸ್ತಿಗೆ ವಿದಾಯ ಹೇಳಿದ್ದಾರೆ. ಈ ವಿಷಯವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಸಮಂತಾ ಅವರು ಒಡೆದ ಹೃದಯದ ಎಮೋಜಿಯನ್ನು ಬಳಸಿದ್ದಾರೆ.
ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ಒಂದು ಕಾಲದಲ್ಲಿ ಪ್ರೇಮಿಗಳಾಗಿದ್ದರು. ಹಲವು ವರ್ಷ ಪ್ರೀತಿಸಿ ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಆದರೆ ನಾಲ್ಕು ವರ್ಷ ಕಳೆಯುವುದರಲ್ಲಿ ಸಂಸಾರದಲ್ಲಿ ಬಿರುಕು ಮೂಡಿ ಇಬ್ಬರು ಬೇರೆ ಬೇರೆಯಾದರು. ಬಳಿಕ ಸಮಂತಾ ಸಿನಿಮಾಗಳಲ್ಲಿ ಬ್ಯುಸಿಯಾದರು. ಆದರೆ ನಾಗಚೈತನ್ಯ ಹೆಸರು ಶೋಭಿತಾ ಜೊತೆ ಕೇಳಿ ಬಂದಿತ್ತು. ಇದೀಗ ನಟಿಯೊಂದಿಗೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಇದು ಸಮಂತಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.