ಚೆನ್ನೈ ;- ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೆಲ ವಿಷಯಗಳನ್ನು ವಿರೋಧಿಸಲು ಆಗುವುದಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಿದರೆ ಮಾತ್ರ ಅದು ನಾಶವಾಗಬಹುದು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದಾರೆ.
“ಸನಾತನವನ್ನು ವಿರೋಧಿಸುವುದಕ್ಕಿಂತ, ಅದನ್ನು ನಾವು ನಿರ್ಮೂಲನೆ ಮಾಡಬೇಕು. ‘ಸನಾತನ’ ಎನ್ನುವ ಪದ ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿಯಾಗಿದೆ” ಎಂದು ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಸದ್ಯ ಉದಯನಿಧಿ ಸ್ಟ್ಯಾಲಿನ್ ಅವರ ಭಾರೀ ಆಕ್ರೋಶ ವ್ಯಕ್ಯವಾಗಿದ್ದು, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸ್ಟ್ಯಾಲಿನ್ ಹೇಳಿಕೆಯನ್ನು ಖಂಡಿಸಿ, “ಸನಾತನವನ್ನು ಹಿಂಬಾಲಿಸುವ 80% ಜನ ಸಂಖ್ಯೆಯ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ” ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.