ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾ ಸೇರಿದಂತೆ ಇನ್ನೂ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಮತ್ತು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಬೆಂಗಳೂರಿನ ನಟಿ ಉಷಾ ಆರ್ ಅವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ನಟರೊಬ್ಬರನ್ನು ಮದುವೆಯಾಗುವುದಾಗಿ ಉಷಾ ನಂಬಿಸಿದ್ದರಂತೆ. ಪ್ರೀತಿ, ಮದುವೆಯ ನಂಬಿಕೆಯಲ್ಲೇ ಆ ನಟನಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದು, ಆ ಬಳಿಕ ಮದುವೆ ಆಗಲು ಸಾಕಷ್ಟುಉ ತಕರಾರು ತಗೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿ ನಟ ದೂರು ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರು ನಟಿಯನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ನಟನಿಗೆ ಅರಿವಾಗುತ್ತಿದ್ದಂತೆಯೇ ವಂಚಿತನಾದ ನಟ ಕೋರ್ಟ್ ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆ ಉಷಾಗೆ ವಾರಂಟ್ ಕೂಡ ಜಾರಿಯಾಗಿತ್ತು. ಈ ಹಿನ್ನೆಲೆ ಚಿತ್ರನಟಿಯನ್ನು ಬಂಧಿಸಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು. ಉಷಾ ‘ಒಂದಲ್ಲ ಎರಡು’, ‘ಸಲಗ’ ಚಿತ್ರಗಳಲ್ಲಿ ಸಹ ನಟಿಯಾಗಿ ನಟಿಸಿದ್ದರು.