ಅಮೂಲ್ಯ ಮಕ್ಕಳ ನಾಮಕರಣದಲ್ಲಿ ಮಿಂಚಿದ ಸ್ಯಾಂಡಲ್ ವುಡ್ ಸೆಲೆಬ್ರಿಟಿಸ್

ಫೋಟೋ ಗ್ಯಾಲರಿ

ನಟಿ ಅಮೂಲ್ಯ ಹಾಗೂ ಜಗದೀಶ್ ದಂಪತಿಗಳು ಇತ್ತೀಚೆಗೆ ಅದ್ದೂರಿಯಾಗಿ ಅವಳ ಮಕ್ಕಳ ನಾಮಕರಣ ಶಾಸ್ತ್ರ ಮಾಡಿದ್ದಾರೆ.

ಅಮೂಲ್ಯ ತಮ್ಮ ಮಕ್ಕಳಿಗೆ ಅಥರ್ವ್ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ.

ಅದ್ದೂರಿಯಾಗಿ ನಡೆದ ನಾಮಕರಣ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಸಿನಿಮಾ ರಂಗದ ಸಾಕಷ್ಟು ಮಂದಿ ಭಾಗಿಯಾಗಿದ್ದರು.

ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಾಮಕರಣ ಶಾಸ್ತ್ರದ ಫೋಟೋಗಳನ್ನು ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.

ಜಗದೀಶ್ ಅವರನ್ನು ಮದುವೆಯಾದ ಬಳಿಕ ನಟಿ ಅಮೂಲ್ಯ ಸಿನಿಮಾಗಳಿಂದ ದೂರ ಉಳಿದಿದ್ದಾರೆ.

ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಅಮೂಲ್ಯ ಅವರು ಸದ್ಯ ಬ್ಯುಸಿ ಇದ್ದಾರೆ. ಮುದ್ದು ಮಕ್ಕಳನ್ನು ಸಾಕುತ್ತಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಿರುತ್ತಾರೆ.