ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಖಾನಾಪೂರದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ಪ್ಲ್ಯಾನ್ ಮಾಡಿದ್ದಾರೆ
ರಾಜ್ಯದಲ್ಲಿ ಕಾಂಗ್ರೆಸ್ (Congress) ನಾಯಕರ ಕಿತ್ತಾಟ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಧಾನಿ ಮೋದಿ ಚುನಾವಣಾ ಪ್ರಚಾರದಲ್ಲಿ ಬಹಿರಂಗವಾಗಿ ಪ್ರಸ್ತಾಪಿಸಿದ ಬೆನ್ನಲ್ಲೇ ಹೈಕಮಾಂಡ್ ದೆಹಲಿಗೆ ಬರುವಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಬುಲಾವ್ ನೀಡಿದೆ
ಡಿಕೆಶಿ ದೆಹಲಿಗೆ ತೆರಳುವ ಮುನ್ನಾ ಸತೀಶ್ ಜಾರಕಿಹೊಳಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಐದು ಕಾರ್ಯಾಧ್ಯಕ್ಷರ ಪೈಕಿ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.