ಬೆಂಗಳೂರು: ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ಬಗ್ಗೆ ಚರ್ಚೆ ಆಗಲಿದೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಸಾಹಿತಿಗಳು, ಚಿಂತಕರ ಅಭಿಪ್ರಾಯ ಸಂಗ್ರಹಿಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ಸಚಿವ ಮಧುಬಂಗಾರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಪುಸ್ತಕ ಬದಲಾಯಿಸಲು ಸಾಧ್ಯವಿಲ್ಲದಿದ್ದರೆ ಮುಂದಿನ ವರ್ಷ ಪಠ್ಯಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ 3 ಕೋಟಿ ಪಠ್ಯ ಪುಸ್ತಕಗಳು ಮುದ್ರಣವಾಗಿವೆ.
ಇವುಗಳನ್ನು ಹಿಂಪಡೆದು ಹೊಸದಾಗಿ ಮುದ್ರಣ ಮಾಡಲು 1 ತಿಂಗಳು ಬೇಕಾಗುತ್ತದೆ. ಅಲ್ಲಿವರೆಗೆ ಮಕ್ಕಳಿಗೆ ಪಾಠ ಇಲ್ಲದಂತಾಗುತ್ತದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕು.