ನವದೆಹಲಿ: ಲೋಕಸಭೆಯ (Lok Sabha) ಒಳಗೆ ಸ್ಮೋಕ್ ಬಾಂಬ್ (Smoke Bomb) ಸಿಡಿಸಿದ ಮನೋರಂಜನ್ (Manoranjan) ಮತ್ತು ಸಾಗರ್ ಶರ್ಮಾ (Sagar Sharma) 45 ನಿಮಿಷಗಳ ಕಾಲ ಪಾಸ್ ಪಡೆದು 2 ಗಂಟೆಗಳ ಕಾಲ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದು ಹೇಗೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಹೌದು. ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:15 ರವರೆಗೆ ಕಲಾಪ ವೀಕ್ಷಣೆಗೆ ಸಮಯ ನೀಡಲಾಗಿತ್ತು. 45 ನಿಮಿಷಗಳವರೆಗೆ ಪಾಸ್ ಪಡೆದ ಇವರು ಸುಮಾರು 2 ಗಂಟೆಗಳ ಕಾಲ ಕಲಾಪ ವೀಕ್ಷಣೆ ಮಾಡಿದ್ದರು.
ಸಂಸತ್ನಲ್ಲಿ ಕಲಾಪ ನಡೆಯಲಿ, ನಡೆಯದೇ ಇರಲಿ 45 ನಿಮಿಷಗಳ ಅವಧಿ ಮುಗಿದ ಕೂಡಲೇ ವೀಕ್ಷಕರ ಗ್ಯಾಲರಿಯಿಂದ ತೆರಳಬೇಕಾಗುತ್ತದೆ. ಈ ನಿರ್ದೇಶನವಿದ್ದರೂ ಇಬ್ಬರನ್ನು 2 ಗಂಟೆಗಳ ಕಾಲ ಕಲಾಪ ವೀಕ್ಷಣೆಗೆ ಅನುಮತಿ ನೀಡಿದ್ದೇ ಅತಿದೊಡ್ಡ ಭದ್ರತಾಲೋಪ. ವೀಕ್ಷಕರ ಜಾಗ ಖಾಲಿ ಇದ್ದ ಕಾರಣ ಭದ್ರತಾ ಸಿಬ್ಬಂದಿ ಈ ವಿಷಯವನ್ನು ಗಮನಿಸದ ಕಾರಣ ಈ ಲೋಪ ಉಂಟಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.