ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಕೊಂಕಲ್ ಗ್ರಾಮದ ಮನೆಯೊಂದರಲ್ಲಿ ಶುಕ್ರವಾರ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 1ಲಕ್ಷ 72 ಸಾವಿರ ಮೌಲ್ಯದ ವಿವಿಧ ಕಂಪನಿಯ ಅಕ್ರಮ ಮದ್ಯ (Alcohol) ವನ್ನು ಅಬಕಾರಿ ಇಲಾಖೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದಾರೆ. ಕೊಂಕಲ್ ಗ್ರಾಮದ ಅಮೀನರಡ್ಡಿ ಸಿದ್ದಣ್ಣಗೌಡ ಪಾಟೀಲ ಬಂಧಿತ ಆರೋಪಿ. ಚುನಾವಣೆ ಹಿನ್ನೆಲೆ ಮದ್ಯವನ್ನ ಖರೀದಿಸಿಟ್ಟಿದ್ದ ಆರೋಪಿ, ದುಪ್ಪಟ್ಟು ದರಕ್ಕೆ ಮಾರಾಟ ಮಾಡೋ ಪ್ಲಾನ್ ಮಾಡಿದ್ದ ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳ ತಂಡ ಅಕ್ರಮ ಮದ್ಯವನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.