ಬಿಜೆಪಿ ಹಿರಿಯ ನಾಯಕ ಅಡ್ವಾಣಿಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಕೆಲ ಸಮಯದಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ 96 ವರ್ಷದ ಎಲ್ಕೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲಗಳ ಪ್ರಕಾರ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಏಮ್ಸ್ ಆಸ್ಪತ್ರೆಯ ಜೆರಿಯಾಟ್ರಿಕ್ ವಿಭಾಗದ ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಅಡ್ವಾಣಿ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲು ಮುಂಜಾಗ್ರತಾ ಕ್ರಮವಾಗಿ ಏಮ್ಸ್ಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ
ಎಲ್ಕೆ ಅಡ್ವಾಣಿ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಿದ ಕೂಡಲೇ ವೈದ್ಯರು ಅವರನ್ನು ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಿದರು. ವೈದ್ಯರ ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದಿದೆ