ಇಲ್ಲಿಂ ಸಮೀಪ ಸರಣಿ ಅಪಘಾತ ಸಂಭವಿಸಿದ ಹಿನ್ನೆಲೆ ಸ್ಥಳದಲ್ಲೇ ಯುವತಿ ದಾರುಣ ಸಾವನ್ನಪ್ಪಿದ ಘಟನೆ ಜರುಗಿದೆ,
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪ ನಡೆದಿದೆ…
ರಾಷ್ಟ್ರೀಯ ಹೆದ್ದಾರಿ-75ರ ಹೊಸಕೋಟೆ ಪೊಲೀಸ್ ಠಾಣೆಯ ಕೋರ್ಟ್ ಸರ್ಕಲ್ ಬಳಿ ಕ್ಯಾಂಟರ್, ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ಬನ್ನೇರುಘಟ್ಟ ಮೂಲದ ಸುಧಾ (20) ಎಂದು ಗುರುತಿಸಲಾಗಿದೆ.
ಕೋರ್ಟ್ ವೃತ್ತದ ಬಳಿ ತಾಯಿಮಗಳಿಬ್ಬರು ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕ್ಯಾಂಟರ್ ಬಳಿಕ ಯುವತಿ ಮೇಲೆಯೇ ಹರಿದಿದೆ. ನಂತರ ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಡಿಕ್ಕಿಯೊಡೆದಿದೆ. ಸದ್ಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.. ..
ಯುವತಿಯ ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.