ಬೆಂಗಳೂರು: ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ರ ಅಡಿಯಲ್ಲಿ ಮಹಿಳೆಯ ಶವದ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದು ಅತ್ಯಾಚಾರವಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. 2015 ರ ಜೂನ್ನಲ್ಲಿ ತುಮಕೂರು ಜಿಲ್ಲೆಯಲ್ಲಿ 21 ವರ್ಷದ ಯುವತಿಯ ಮೃತ ದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಇದೀಗ ಸುಪ್ರೀಂಕೋರ್ಟ್ ಸಹ ಎತ್ತಿಹಿದಿದೆ.
21 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಆರೋಪಿಗಳು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಸಂಬಂಧ ಪೊಲೀಸರು ಕೊಲೆ ಜತೆ ಅತ್ಯಾಚಾರ ಕೇಸ್ ದಾಖಲಿಸಿದ್ದರು. ಆದ್ರೆ, ಹೈಕೋರ್ಟ್, ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದಿದೆ.
ಪ್ರಕರಣದಲ್ಲಿ 21ವರ್ಷದ ಯುವತಿಯನ್ನು ಕೊಲೆ ಮಾಡಲಾಗಿತ್ತು. ಬಳಿಕ ಆರೋಪಿಗಳು, ಮೃತದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು, ಆರೋಪಿಗಳ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು 2023ರಲ್ಲಿ ತೀರ್ಪು ನೀಡಿತ್ತು.
ಆದ್ರೆ, ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಪೀಠ, ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಎತ್ತಿ ಹಿಡಿದಿದ್ದು, ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.