ರಾಜಸ್ಥಾನ;- ನಗರದ ಡುಂಗರ್ ಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪರಿಚಿತರಿಂದಲೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜರುಗಿದೆ.
ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಬಳಿಕ ಹೊರ ವಲಯದ ಕಾಡಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ದೋವಾರ ಠಾಣೆ ಪೊಲೀಸರು ನಾಪತ್ತೆಯಾಗಿರುವ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.