ಬೆಂಗಳೂರು: ರ್ಯಾಪಿಡೋ (Rapido) ಬೈಕ್ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಏನಿದು ಘಟನೆ?
ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ ಇದೇ ತಿಂಗಳ ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ರ್ಯಾಪಿಡೋ ಬುಕ್ ಮಾಡಿದ್ದಾಳೆ. ಬೈಕ್ (Rapido Bike) ಸವಾರ ಓಟಿಪಿ ಪಡೆಯುವ ನೆಪದಲ್ಲಿ ಮೊಬೈಲ್ ಕಸಿದಿದ್ದಾನೆ. ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಚಲಿಸುತ್ತಿದ್ದ ಬೈಕ್ನಿಂದ ಜಿಗಿದಿದ್ದಾಳೆ. ನಂತರ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಆಂಧ್ರಪ್ರದೇಶ ಮೂಲದ ದೀಪಕ್ ರಾವ್ನನ್ನ ಬಂಧಿಸಿದ್ದಾರೆ. ಯಲಹಂಕ ಉಪನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.