ಮುಂಬೈ: ಮುಂಬೈನಿಂದ (Mumbai) ಗುವಾಹಟಿಗೆ (Guwahati) ತೆರಳುತ್ತಿದ್ದ ವಿಮಾನದಲ್ಲಿ (Flight) ಪ್ರಯಾಣಿಕನೊಬ್ಬ ಸಹ ಪ್ರಯಾಣಿಕರಿಗೆ (Police) ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದೆ. ಈ ಆರೋಪ ಕೇಳಿ ಬಂದ ಕೂಡಲೇ ಆತನನ್ನು ವಿಮಾನದ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮುಂಬೈ ವಿಮಾನ ನಿಲ್ದಾಣದಿಂದ ಗುವಾಹಟಿಗೆ ತೆರಳುತ್ತಿದ್ದ ವಿಮಾನದಲ್ಲಿ ಆರೋಪಿ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಆತನನ್ನು ಗುವಾಹಟಿ ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ವಿಮಾನಯಾನ ಸಂಸ್ಥೆ ನಿರಾಕರಿಸಿದೆ.
ಪ್ರಯಾಣಿಕರೊಬ್ಬರು ನೀಡಿದ ದೂರಿನ ಮೇರೆಗೆ ಸ್ಥಳೀಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನಿಡಿದ್ದಾರೆ. ಇದರ ಹೊರತಾಗಿಯೂ ಹೆಚ್ಚಿನ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ವಿಮಾನಯಾನ ಸಂಸ್ಥೆ ನಿರಾಕರಿಸಿದೆ ಎಂದು ವರದಿಯಾಗಿದೆ