ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ನಾಳೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ನಿರ್ಭಯಾ ನಿಯಿಂದ ಸೇಫ್ ಸಿಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ದೇಶದಾದ್ಯಂತ ಆಯ್ಕೆಯಾದ ಎಂಟು ನಗರಗಳಲ್ಲಿ ಬೆಂಗಳೂರು ಕೂಡ ಒಂದು, ಇದು ಕೂಡ. ಗೃಹ ವ್ಯವಹಾರಗಳ ಸಚಿವಾಲಯದ ಯೋಜನೆಯಾಗಿದೆ.ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ನಿರ್ಣಾಯಕವಾಗಿರುವ ರಾಜ್ಯ ರಾಜಧಾನಿಯ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬೆಂಗಳೂರು ನಗರದತ್ತ ಗಮನ ಹರಿಸಿದ್ದಾರೆ. ತಮ್ಮ ಕೊನೆಯ ಭೇಟಿಯ ಸಂದರ್ಭದಲ್ಲಿ ನಗರದ ಟೌನ್ ಹಾಲ್‍ನಲ್ಲಿ ಸಮಾಜದ ಎಲ್ಲಾ ವರ್ಗದ ಜನರನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದ್ದರು. ಇದೀಗ ನಾಳೆ ಮತ್ತೆ ನಗರಕ್ಕೆ ಭೇಟಿ ನೀಡಲಿದ್ದು, ವಾಹನ ಸವಾರರಿಗೆ ಕೊಂಚ ಟ್ರಾಫಿಕ್ ಕಿರಿ ಕಿರಿ ಉಂಟಾಗುವ ಸಾಧ್ಯತೆ ಇದೆ.
Subscribe to Updates
Get the latest creative news from FooBar about art, design and business.