ಬೆಂಗಳೂರು ;- ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1 ತಿಂಗಳಲ್ಲಿ 368 ಕೋಟಿ ರೂ. ವೆಚ್ಚ ತಗುಲಿದೆ.
ಉಚಿತ ಪ್ರಯಾಣದ ಶಕ್ತಿ ಯೋಜನೆ ಆರಂಭವಾಗಿದ್ದು, ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.
ಒಂದೇ ತಿಂಗಳಲ್ಲಿ ನಾಲ್ಕು ನಿಗಮಗಳಲ್ಲಿ 15.57ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ಬಿಎಂಟಿಸಿಯಲ್ಲಿ ಅತಿ ಹೆಚ್ಚು 5.02 ಕೋಟಿ ಮಹಿಳಾ ಪ್ರಯಾಣಿಕರು ಓಡಾಡಿದ್ದಾರೆ. ಕೆಎಸ್ಆರ್ಟಿಸಿಯಲ್ಲಿ 4.67 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 2.13 ಕೋಟಿ, NWKRTC ಯಲ್ಲಿ 3.74 ಮಹಿಳೆಯರು ಪ್ರಯಾಣಿಸಿದ್ದಾರೆ.
ಬಿಎಂಟಿಸಿಯಲ್ಲಿ ಮಹಿಳಾ ಪ್ರಯಾಣಿಕರಿಗೆ 64.72 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಎಸ್ಆರ್ಟಿಸಿಯಲ್ಲಿ 137.62 ಕೋಟಿ ರೂ., ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ.ಯಲ್ಲಿ 95.45 ಕೋಟಿ ರೂ., ಕೆ.ಕೆ.ಆರ್.ಟಿ.ಸಿ.ಯಲ್ಲಿ 70.42 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ.