ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಭಾಗವಹಿಸಲು ಇಸ್ಲಾಮಾಬಾದ್ಗೆ ತೆರಳಿದ್ದಾರೆ. ಸುಮಾರು 9 ವರ್ಷಗಳ ಬಳಿಕ ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದ ಜೈಶಂಕರ್ ಅವರನ್ನು ದಕ್ಷಿಣ ಏಷ್ಯಾದ ಮಹಾನಿರ್ದೇಶಕ ಇಲ್ಯಾಸ್ ಮೆಹಮೂದ್ ನಿಜಾಮಿ ಆತ್ಮೀಯವಾಗಿ ಬರಮಾಡಿಕೊಂಡರು.
ಶಾಂಘೈ ಸಹಕಾರ ಸಂಸ್ಥೆಯ ಸರ್ಕಾರದ ಮುಖ್ಯಸ್ಥರ ಮಂಡಳಿಯ 23ನೇ ಸಭೆಗೆ ಮುನ್ನ ಅವರು ಆಯೋಜಿಸಿದ್ದ ಔತಣಕೂಟಕ್ಕೂ ಮುನ್ನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಹಸ್ತಲಾಘವ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡರು.
SCO ಒಳಗೆ ಎರಡನೇ ಅತ್ಯುನ್ನತ ವೇದಿಕೆಯಾದ SCO CHG ಯ ಎರಡು ದಿನಗಳ ಸಭೆಯು ಕೌನ್ಸಿಲ್ನ ಪ್ರಸ್ತುತ ಅಧ್ಯಕ್ಷರಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ.
ಕಾಶ್ಮೀರ ಸಮಸ್ಯೆ ಮತ್ತು ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದೇಶಗಳ ಮಧ್ಯೆ ದ್ವೇಷಮಯ ವಾತಾವರಣ ಇರುವಾಗ ಸುಮಾರು 9 ವರ್ಷದ ನಂತರ ಭಾರತದ ಮಂತ್ರಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು ವಿದೇಶಾಂಗ ಸಚಿವೆಯಾಗಿದ್ದ ದಿ. ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನಕ್ಕೆ 2015ರ ಡಿಸೆಂಬರ್ನಲ್ಲಿ ಭೇಟಿ ನೀಡಿದ್ದರು.
ಇತ್ತೀಚಿನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜೈಶಂಕರ್ , ಯಾವುದೇ ನೆರೆಹೊರೆಯವರಂತೆ, ಭಾರತವು ಖಂಡಿತವಾಗಿಯೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ. ಆದರೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸದ ಹೊರತು ಯಾವುದೇ ಮಾತುಕತೆ ಇಲ್ಲ ಎಂದಿದ್ದರು.