ದೆಹಲಿಯಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅತ್ತ ದೆಹಲಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳುತ್ತಾ ಇದ್ರೆ ಇತ್ತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡ ಬಿಜೆಪಿ ಪಕ್ಷಕ್ಕೆ ಸೇರುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ.
2023ರ ವಿಧಾನಸಭೆ ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದರು. ಇದೀಗ ರಿವರ್ಸ್ ಆಪರೇಷನ್ ಶುರು ಮಾಡಿರುವ ಬಿಜೆಪಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ಗೆ ಟಕ್ಕರ್ ಕೊಡಲು ಮುಂದಾಗಿದೆ.