ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಅವಕಾಶ ಕೊಡಬೇಕಿತ್ತು ಎಂದುಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಆಗ್ರಹಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸಚಿವರಾಗಲು ಅರ್ಹರಾಗಿರುತ್ತಾರೆ ಆದರೆ ಅವರಿಗೆ ಸಚಿವ ಸ್ಥಾನ ಕೊಡಬೇಕಿತ್ತು ಇನ್ನು
ಮುಂದಾದರೂ ಅವರಿಗೆ ಸಚಿವ ಸ್ಥಾನ ಕೊಡಬೇಕು ಅನ್ನೋದು ಅವರ ಧರ್ಮ ಎಂದ ಸ್ವಾಮೀಜಿ ಅವರು, ಜಗದೀಶ್ ಶೆಟ್ಟರ್ ಹಾಗೂ ಸವದಿ ಒಳ್ಳೆ ಅನುಭವಿ ರಾಜಕಾರಣಿಗಳು. ಸಜ್ಜನ,ಸಾತ್ವಿಕ ರಾಜಕಾರಣಿಗಳು ಆಗಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರ ಅನುಭವವನ್ನು ಮಾರ್ಗದರ್ಶನವನ್ನು ಪಕ್ಷ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನಾನು ಇನ್ನೂಂದು ಸಲ ನಾನು ಅವರಿಗೆ ಸಚಿವ ಸ್ಥಾನ ಕೊಡಲು ಒತ್ತಾಯ ಮಾಡ್ತೀನಿ ಎಂದರು.
ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಲಿಂಗಾಯತರನ್ನು ಕಡೆಗಣಿಸಿದ ಹಾಗೆ ಕಾಣಲ್ಲ ಇನ್ನು ಅವಕಾಶ ಇದೆ, ಜಗದೀಶ್ ಶೆಟ್ಟರ್ ಹಾಗೂ ಸವದಿಗೆ ಅವಕಾಶ ಮಾಡಿಕೊಡೋದು ಪಕ್ಷಕ್ಕೆ ಒಳ್ಳೆದು. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಗೆ ಮಂತ್ರಿ ಸ್ಥಾನ ಕೊಟ್ಟರೆ ಕಾಂಗ್ರೆಸ್ ಗೆ ಒಳ್ಳೆದು ಎಂದ ರಾಜಯೋಗಿಂದ್ರ ಸ್ವಾಮೀಜಿ ತಮ್ಮ ನಿಲುವು ಸ್ಪಷ್ಟಪಡಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡೇ ಮಾಡತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶ್ರೀಗಳು ಅದಕ್ಕೆ ಅದರದೇ ಆದ ನೀತಿ ಇರತ್ತೆ ಅದನ್ನು ಜಾರಿಗೆ ತರಬಹುದು. ತರದೆ ಇರೋಕೆ ಸಾಧ್ಯ ಇಲ್ಲ ಎಂದರು.