ಹುಬ್ಬಳ್ಳಿ: ಬಿಜೆಪಿ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆ ಮಾಡದೇ ಇರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ದೆಹಲಿಗೆ ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ದೆಹಲಿಗೆ ಪ್ರಯಾಣ ಬೆಳೆಸಿದರು.
ಮೊದಲ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರು ಇರದ ಕಾರಣ ಸಾಕಷ್ಟು ಅವರ ಅಭಿಮಾನಿಗಳು ಶೆಟ್ಟರ್ ನಿವಾಸಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರು ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಂಜೆ ಫೋನ್ ಮಾಡಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ಶೆಟ್ಟರ್ ದೂರವಾಣಿಯಲ್ಲಿಯೇ ನಿನ್ನೆ ನಡ್ಡಾ ಜೊತೆಗೆ ಮಾತನಾಡಿದ್ದು ಅವರ
ಸ್ಟ್ಯಾಂಡ್ ನಾನು ತಿಳಿಸಿದ್ದರು ಎನ್ನಲಾಗಿದೆ .ನನಗೆ ಟಿಕೆಟ್ ಸಿಗೋ ಹೋಪ್ಸ್ ಇಟ್ಟುಕೊಂಡು ದೆಹಲಿಗೆ ಹೊರಟಿದ್ದಾರೆ.
ದೆಹಲಿಗೆ ಹೋಗುವ ಮುನ್ನ ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನ ಭೇಟಿಯಾಗಬೇಕಿತ್ತು. ಆದ್ರೆ ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರ ಏರ್ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರಬಹುದು ಎಂದು ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಿಕೊಂಡು ಬಂದಿದ್ದು, ಈ ಬಾರಿ ಹೊಸ ಮುಖಕ್ಕೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಭಿವೃದ್ಧಿ ಕಾರ್ಯ ಮಾಡಲು ಅಧಿಕಾರಿ ಮುಖ್ಯವಲ್ಲ ನಾನು ಮುಖ್ಯಮಂತ್ರಿ ಆಗಿ ಸಭಾಪತಿ ಆಗಿ ಹಾಗೂ ಆರು ಸಲ ಶಾಸಕರಾಗಿ
ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಆದರೆ ಈಗ ಟಿಕೆಟ್ ಮೊದಲ ಪಟ್ಟಿಯಲ್ಲಿ ಕೈ ಬಿಟ್ಟಿದ್ದು ಯಾವ ಕಾರಣ ಅಂತಾ ಗೊತ್ತಿಲ್ಲ ಕಾರಣ ದೆಹಲಿಗೆ ಹೋದ ನಂತರ ಗೊತ್ತಾಗಲಿದೆ ಎಂದರು.
ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸಿ ಹೊಸ ಮುಖಕ್ಕೆ ನೀಡುವ ಪ್ಲಾನ್ ಹೈಕಮಾಂಡ್ ಮಾಡಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್, ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸಲು ಕೂಡಲೇ ದೆಹಲಿಗೆ ಬುಲಾವ್ ನೀಡಿದೆ ಎಂಬ ಮಾತಿಗೆ ನೋಡೊಣ ಎಂದರು