ಜಲಗಾಂವ್: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ(Government of Maharashtra) ‘ಡೆತ್ ವಾರಂಟ್’ ಹೊರಡಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ಅದು ಪತನವಾಗಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್(Sanjay Raut) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.
ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ 16(Shiv Sena) ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಬಾಕಿ ಉಳಿದಿರುವ ವಿಚಾರವಾಗಿ ಸುಪ್ರೀಂ ಕೋರ್ಟ್ನ ತೀರ್ಪನ್ನು ರಾಜ್ಯಸಭಾ ಸದಸ್ಯರು ಉಲ್ಲೇಖಿಸಿದರು. ಈಗಿರುವ ಮುಖ್ಯಮಂತ್ರಿ ಮತ್ತು ಅವರ 40 ಶಾಸಕರ ಸರ್ಕಾರ 15-20 ದಿನಗಳಲ್ಲಿ ಪತನವಾಗಲಿದೆ. ಈ ಸರ್ಕಾರದ ಡೆತ್ ವಾರಂಟ್ ಹೊರಡಿಸಲಾಗಿದೆ. ಇದಕ್ಕೆ ಯಾರು ಸಹಿ ಹಾಕುತ್ತಾರೆ ಎಂಬುದು ಈಗ ನಿರ್ಧಾರವಾಗಲಿದೆ ಎಂದು ರಾವುತ್ ಹೇಳಿದ್ದಾರೆ.