ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ಸೌದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ ಶ್ರೀರಾಮ್, ಮೈಲಾರಿ ಮುಂತಾದ ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸೌದತ್ತಿ ಎಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ ಉತ್ತರಕಾಂಡದ ಚಿತ್ರೀಕರಣದ ನಂತರ ಶಿವಣ್ಣ ಪತ್ನಿ ಸಮೇತ ದೇವಸ್ಥಾನಕ್ಕೆ ತೆರಳಿ ದೇವಿಯ ಆಶಿರ್ವಾದವನ್ನು ಪಡೆದಿದ್ದಾರೆ.
ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ “ಉತ್ತರಕಾಂಡ” ಚಿತ್ರವನ್ನು ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಜೊತೆ ಡಾಲಿ ಧನಂಜಯ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದಾರೆ.