ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶೀವಣ್ಣ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಡಿಸ್ಚಾರ್ಜ್ ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಬಿಡುವಿಲ್ಲದ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ ವೈದ್ಯರ ಸಲಹೆ ಮೇರೆಗೆ ಒಂದು ದಿನ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ.
ನಿನ್ನೆ ಚಿಕಿತ್ಸೆ ಪಡೆದು ಇಂದು ಬೆಳಿಗ್ಗೆ ಮನೆಗೆ ತೆರಳಲಿದ್ದಾರೆ ಶಿವರಾಜ್ ಕುಮಾರ್. ಚಿಕಿತ್ಸೆ ನಂತರ ಶಿವರಾಜ್ ಕುಮಾರ್ ಆರಾಮಾಗಿದ್ದಾರೆ. ಯಾವುದೇ ಆತಂಕ ಪಡುವಂಥದ್ದು ಇಲ್ಲ ಎಂದು ಶಿವಣ್ಣ ಆಪ್ತರು ತಿಳಿಸಿದ್ದಾರೆ.